ಬಳ್ಳಾರಿಯಲ್ಲಿ ಚುನಾವಣಾ ಕಣಕ್ಕಿಳಿದ ರೆಡ್ಡಿ ಬ್ರದರ್ಸ್..! ➤ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ

(ನ್ಯೂಸ್ ಕಡಬ) newskadaba.com ಬಳ್ಳಾರಿ, 02. ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ ಬೆನ್ನಲ್ಲೇ ಇವರ ಸಹೋದರ ಕರುಣಾಕರ ರೆಡ್ಢಿ ನಾನು ಬಿಜೆಪಿಯಿಂದ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳಿದ್ದಾರೆ.

ಜನಾರ್ಧನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮಿ ಬಳ್ಳಾರಿ ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದರೆ, ನಾನು ಬಿಜೆಪಿಯಿಂದ ಸ್ಪರ್ಧೆ ಮಾಡುವುದು ಖಚಿತ. ಪಕ್ಷ ಹೇಳಿದ ಕೆಲಸ ಮಾಡುವುದು ನನ್ನ ಕರ್ತವ್ಯ, ಯಾರೂ ಬೇಕಾದರೂ ಪಕ್ಷ ಕಟ್ಟಬಹುದು, ಸ್ಪರ್ಧೆ ಮಾಡಬಹುದು. ಆದರೆ ನಾನು ಬಿಜೆಪಿಯಲ್ಲೇ ಇರುತ್ತೇನೆ. ಟಿಕೆಟ್ ನೀಡಿದರೆ ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಕಳೆದ ಡಿ. 25ರಂದು ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಯವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ರಾಜಕೀಯ ಪಕ್ಷ ಸ್ಥಾಪಿಸಿ ಇದರ ಮೂಲಕ ಮುಂದೆ ಬರುವ ಚುನಾವಣೆ ಎದುರಿಸುವುದಾಗಿ ತಿಳಿಸಿದ್ದರು.

Also Read  ಕಡಬ: ಅನಾರೋಗ್ಯ ಪೀಡಿತ ವೃದ್ದೆಯನ್ನು ಮರದ ಬಡಿಗೆಗೆ ಕಟ್ಟಿ ಆಸ್ಪತ್ರೆಗೆ ಹೊತ್ತೊಯ್ದ ಮಕ್ಕಳು

error: Content is protected !!
Scroll to Top