ಮೆಲ್ಕಾರ್: ಯುವಕನಿಗೆ ತಲವಾರು ದಾಳಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.14. ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನೋರ್ವನಿಗೆ ದುಷ್ಕರ್ಮಿಗಳಿಬ್ಬರ ತಂಡ ಹಲ್ಲೆ ನಡೆಸಿ ಪರಾರಿಯಾದ ಘಟನೆ ಮಂಗಳವಾರ ರಾತ್ರಿ ಮೆಲ್ಕಾರ್ ಆರ್.ಆರ್. ಮಿಲ್ ಬಳಿ ನಡೆದಿದೆ.

ಮೆಲ್ಕಾರ್ ಪೆಟ್ರೋಲ್ ಬಂಕ್ ಮಾಲಕನ ಪುತ್ರ ಪವನ್ (28) ದುಷ್ಕರ್ಮಿಗಳ ದಾಳಿಗೊಳಗಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪವನ್ ಪೆಟ್ರೋಲ್ ಬಂಕ್‌ನಿಂದ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಮೆಲ್ಕಾರ್ ಆರ್.ಆರ್. ಮಿಲ್ ಬಳಿ ಪೊದೆಯಲ್ಲಿ ಅವಿತು ಕುಳಿತಿದ್ದ ಇಬ್ಬರು ದುಷ್ಕರ್ಮಿಗಳು ಬೈಕನ್ನು ಅಡ್ಡಗಟ್ಟಿ ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Scroll to Top