ಮಂಗಳೂರು: ಅಂಬೇಡ್ಕರ್ ಪರಿ ನಿರ್ವಹಣಾ ದಿನಾಚರಣೆಯಲ್ಲಿ ಶಿಷ್ಟಾಚಾರದ ಉಲ್ಲಂಘನೆ ► ಜಿ.ಪಂ. ಅಧ್ಯಕ್ಷರನ್ನೇ ಬಿಟ್ಟು ತುರ್ತಾಗಿ ಕಾರ್ಯಕ್ರಮ ಮುಗಿಸಿದ ಸಮಾಜ ಕಲ್ಯಾಣ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.07. ಸಮಾಜ ಕಲ್ಯಾಣ ಇಲಾಖೆಯ ವತಿಯಂದ ಡಿಸೆಂಬರ್ 06 ಬುಧವಾರದಂದು ನಡೆದ ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ರವರ ಪರಿ ನಿರ್ವಹಣಾ ದಿನದ ಪ್ರಯುಕ್ತ ಮಂಗಳೂರಿನ ಪುರಭವನದ ಎದುರುಗಡೆ ಇರುವ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರವನ್ನು ಉಲ್ಲಂಘಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಆರೋಪಿಸಿದ್ದಾರೆ.

ಕಾರ್ಯಕ್ರಮವು ಕಾರ್ಯಕ್ರಮವು ಬೆಳಿಗ್ಗೆ 10.00 ಗಂಟೆಗೆ ಜರಗಲಿರುವುದಾಗಿ ಇಲಾಖೆಯ ಅಧಿಕಾರಿಯವರು ತಿಳಿಸಿದ್ದು, ಅದರಂತೆ ನಾನು 10.00 ಗಂಟೆಗೆ ಕಾರ್ಯಕ್ರಮಕ್ಕೆ ಆಗಮಿಸಿದಾಗ, ಅಧಿಕಾರಿಗಳು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಕಾರ್ಯಕ್ರಮವನ್ನು ಪ್ರಾರಂಭಿಸಿ ಮುಗಿಸಿರುತ್ತಾರೆ. ಇದು ಶಿಷ್ಟಾಚಾರದ ಉಲ್ಲಂಘನೆಯಾಗಿದ್ದು, ಇದನ್ನು ನಾನು ಖಂಡಿಸುತ್ತೇನೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡುರವರು ಹೇಳಿದ್ದಾರೆ.

Also Read  ತೆಲುಗು ನಟನಿಂದ ಸಾಹಸ ಸಿಂಹ ವಿಷ್ಣುವರ್ಧನ್​ ಅವಹೇಳನ ➤ ನವರಸ ನಾಯಕ ಜಗ್ಗೇಶ್ ಕೆಂಡಾಮಂಡಲ

error: Content is protected !!
Scroll to Top