ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 03. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ಕಜೆ ಸಮೀಪದ ನಡೆದಿದೆ.

ಮೃತ ಮಹಿಳೆಯನ್ನು ಸುಂದರಿ(25) ಎಂದು ಗುರುತಿಸಲಾಗಿದೆ. ಕಳೆದ ಡಿ. 12ರಂದು ವಿಷ ಸೇವಿಸಿದ್ದ ಸುಂದರಿ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಡಿ. 27ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆಯ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Scroll to Top