ಕೆರೆಗೆ ಆಕಸ್ಮಿಕವಾಗಿ ಬಿದ್ದು ಯುವಕ ಮೃತ್ಯು.!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.03.  ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕನೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬೆಳವಂಗಲ ಬಳಿ ವರದಿಯಾಗಿದೆ.

ಮೃತ ಯುವಕನನ್ನು ಮದುರೆ ಹೋಬಳಿಯ ಪುಟ್ಟಯ್ಯ ಅಗ್ರಹಾರದ ನಿವಾಸಿ ಮುನಿರಾಜ್ (26) ಎಂದು ಗುರುತಿಸಲಾಗಿದೆ.

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.ವಿಷಯ ತಿಳಿದ ತಕ್ಷಣ ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ  ಈ ಬಗ್ಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group