ಕಾರು ತಡೆದು 80 ಲಕ್ಷ ದೋಚಿದ ನಕಲಿ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 03.   ಪೊಲೀಸರ ವೇಷದಲ್ಲಿದ್ದ ನಾಲ್ವರು ದುಷ್ಕರ್ಮಿಗಳು ಅಡಿಕೆ ಮಂಡಿ ಮಾಲಿಕನ ಕಾರನ್ನು ಅಡ್ಡಗಟ್ಟಿ ಚಾಲಕನನ್ನು ಹೆದರಿಸಿ .80 ಲಕ್ಷ ರೂಪಾಯಿವನ್ನು ದೋಚಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ವಿಲ್ಸನ್‌ಗಾರ್ಡನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

ತುಮಕೂರು ಜಿಲ್ಲೆಯ ತವಡೇಹಳ್ಳಿ ಗ್ರಾಮದ ಅಡಿಕೆ ಮಂಡಿ ಮಾಲಿಕ ಮೋಹನ್‌ ಅವರ ಕಾರು ಚಾಲಕ ಚಂದನ್‌(28) ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ನಕಲಿ ಪೊಲೀಸರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Also Read  ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ !      ➤  ಓರ್ವ ಆರೋಪಿಯ ಬಂಧನ

error: Content is protected !!
Scroll to Top