ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.03. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ಕಜೆ ಸಮೀಪ ಸಂಭವಿಸಿದೆ.
ಮೃತಪಟ್ಟ ಮಹಿಳೆಯನ್ನು ಸುಂದರಿ(25) ಎಂದು ಗುರುತಿಸಲಾಗಿದೆ.

ಸುಂದರಿ ಎಂಬವರು ವಿಷ ಸೇವಿಸಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

 

Scroll to Top