(ನ್ಯೂಸ್ ಕಡಬ) newskadaba.com ನವದೆಹಲಿ, ಜ.03. ಸಂಸತ್ತಿನ 2023ನೇ ಸಾಲಿನ ಬಜೆಟ್ ಅಧಿವೇಶನವು ಜನವರಿ 31 ರಿಂದ ಪ್ರಾರಂಭವಾಗಿ ಏಪ್ರಿಲ್ 6 ರಂದು ಕೊನೆಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದು, ಬಜೆಟ್ ಅಧಿವೇಶನದ ಮೊದಲ ದಿನದಂದು ಎರಡೂ ಸದನಗಳಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು ಎಂದು ಸರಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಅಧಿವೇಶನದ ಆರಂಭವು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಅಧಿವೇಶನವನ್ನುದ್ದೇಶಿಸಿ ಭಾಷಣದೊಂದಿಗೆ ಆರಂಭಿಸುವ ಸಾಧ್ಯತೆಯಿದೆ ಎನ್ನಲಾಗಿದೆ.