ಸುಳ್ಯ : ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com  ಸುಳ್ಯ, ಜ.03. ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಸಂಭವಿಸಿದೆ.

ಮೃತರನ್ನು ಬಾಬು ಡಿಸೋಜಾ ಅವರ ಪುತ್ರ ಡೆನಿಸ್ (51) ಎಂದು ಗುರುತಿಸಲಾಗಿದೆ.      ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ಹೇಳಲಾಗುತ್ತಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ. ಕಲ್ಲುಗುಂಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.

 

 

Scroll to Top