ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವೀರ ಕಂಬಳ ಸಿನೆಮಾದಲ್ಲಿ ನಟನೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.03.  ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ  ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ.

ಈ ಸಿನಿಮಾ ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಯಲ್ಲಿ ಕೂಡ ವೀರ ಕಂಬಳ ಸಿನೆಮಾ ತೆರೆ ಕಾಣಲಿದೆ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ.  ಈ ಚಿತ್ರಕ್ಕೆ ಬರೋಬ್ಬರಿ 7 ವರ್ಷಗಳ ಕಾಲ ಸಂಶೋಧನೆ ಮಾಡಿ ಕಥೆ ಬರೆಯಲಾಗಿದೆ. ತುಳುವಿನಲ್ಲಿ ಈ ಚಿತ್ರಕ್ಕೆ ‘ಬಿರ್ದ್‌ದ ಕಂಬಳ’ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ಅರುಣ್ ರೈ ತೋಡಾರ್ ಎಂಬವರು ಬಂಡವಾಳ ಹೂಡಿದ್ದಾರೆ. ತುಳುನಾಡಿನ ಪ್ರಸಿದ್ಧ ಕಲಾವಿದರು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದು, ಇದರ ಜೊತೆಗೆ ಪ್ರಕಾಶ್ ರಾಜ್, ಆರ್ಮುಗ ರವಿಶಂಕರ್‌ ಮುಖ್ಯಭೂಮಿಕೆಯಲ್ಲಿ  ಕಾಣಿಸಿಕೊಂಡಿದ್ದಾರೆ.  ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದ್ದು, ವೀರ ಕಂಬಳ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಈಗ ನಡೆಯುತ್ತಿದೆ ಎನ್ನಲಾಗಿದೆ.

Also Read  ಅಟೋ ರಿಕ್ಷಾ ಪಲ್ಟಿ ➤ ಓರ್ವ ಪ್ರಯಾಣಿಕನಿಗೆ ಗಾಯ

error: Content is protected !!
Scroll to Top