ಎರಡನೇ ಕೋವಿಡ್ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ➤ ಆರೋಗ್ಯ ಸಚಿವಾಲಯ ಸ್ಪಷ್ಟನೆ

 (ನ್ಯೂಸ್ ಕಡಬ) newskadaba.com ನವದೆಹಲಿ, ಜ.03. ದೇಶದಲ್ಲಿ ಸದ್ಯದ ಕೋವಿಡ್‌ ಪರಿಸ್ಥಿತಿಯನ್ನು ಗಮನಿಸಿದರೆ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

ದೇಶದಲ್ಲಿ ಮೊದಲ ಬೂಸ್ಟರ್ ಡ್ರೈವ್ ಅನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 134 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 2,582 ರಷ್ಟಿದೆ ಎಂದು ವರದಿಯಾಗಿದೆ. ದೇಶದಾದ್ಯಂತ ಇದುವರೆಗೆ ಒಟ್ಟು 220.11 ಕೋಟಿ ಡೋಸ್‌ ಕೋವಿಡ್‌ ಲಸಿಕೆ ವಿತರಿಸಲಾಗಿದೆ. ಚೀನಾ, ಅಮೆರಿಕ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದರು.

Also Read  ಇಂಡಿಯನ್ ಸ್ಟಾಕ್ ಮಾರ್ಕೆಟ್- ಪ್ರಥಮ ಬಾರಿಗೆ 84 ಸಾವಿರದ ಗಡಿದಾಟಿ ಇತಿಹಾಸ ಬರೆದ ಸೆನ್ಸೆಕ್ಸ್

error: Content is protected !!
Scroll to Top