ಬೈಕ್ ಗೆ ಗುದ್ದಿದ ಕಾರು ➤ ರೈತ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com .  ಆನೇಕಲ್‌, ಜ. 03.  ರೈತನೋರ್ವ ತನ್ನ ಬೈಕಿನಲ್ಲಿ ಬರುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಗುದ್ದಿ  ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಆನೇಕಲ್‌ ಠಾಣಾ ವ್ಯಾಪ್ತಿಯ ಸುರಗಜಕ್ಕನ ಹಳ್ಳಿ ಬಳಿ ಸಂಭವಿಸಿದೆ.

ಮೃತ ರೈತನನ್ನು ಕುಂಬಾರನಹಳ್ಳಿ ವಾಸಿ ನಂಜುಂಡರೆಡ್ಡಿ ಎಂದು ಗುರುತಿಸಲಾಗಿದೆ .ಜಿಗಣಿ ರಸ್ತೆಯಿಂದ ಆನೇಕಲ್‌ ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರು ಚಾಲಕ ಕಾರುನಿಲ್ಲಿಸದೇ ಅದೇ ವೇಗದಲ್ಲಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ. ಕಾರಿನ ಪತ್ತೆಗೆ ಬಲೆ ಬೀಸಲಾಗಿದೆ ಎಂದು ವೃತ್ತ ನಿರೀಕ್ಷಕ ಚಂದ್ರಪ್ಪ ತಿಳಿಸಿದ್ದಾರೆ.

Also Read  ಕುವೈಟ್ ಏರ್ ಪೋರ್ಟ್ ನಲ್ಲಿ ಕಾಣೆಯಾಗಿದ್ದ ಉಡುಪಿಯ ಮಹಿಳೆ ಪೊಲೀಸ್ ವಶಕ್ಕೆ

ಸ್ಥಳೀಯವಾಗಿ ಲಭ್ಯವಾದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಗಮನಿಸಿದರೆ ಅಪಘಾತ ಎಂದು ಕಂಡು ಬಂದರೂ ಪ್ರಾಥಮಿಕ ತನಿಖೆಯಲ್ಲಿ ಕೊಲೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎನ್ನಲಾಗಿದೆ.

 

error: Content is protected !!
Scroll to Top