ಜ.4 ರಂದು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ, ಬ್ರೆಝಿಲ್ ಮುಂತಾದ ದೇಶಗಳಲ್ಲಿ ಈಗಾಗಲೇ  ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ನಾಲ್ಕನೇ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆ ಗಳಲ್ಲಿ ಜನವರಿ 4 ರಿಂದ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ.

ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಲಸಿಕಾ ಡೋಸ್ (ಬೂಸ್ಟರ್ ಡೋಸ್) ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕಾಕರಣವನ್ನು ಖಚಿತಪಡಿಸಿಕೊಂಡು ಮತ್ತು ಲಸಿಕೆಯನ್ನು ನಿಗದಿಪಡಿಸಿಕೊಂಡು ಲಸಿಕೆ ಪಡೆಯುವಂತೆ ಹಾಗೂ ಕೋವಿಶೀಲ್ಡ್ ಲಸಿಕೆಯು ಲಭ್ಯವಿರುವುದಿಲ್ಲ. ಲಸಿಕೆ ಬಂದ ತಕ್ಷಣ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Also Read  ಕಡಬ: ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತ

error: Content is protected !!
Scroll to Top