ರಸ್ತೆಯ ಗುಂಡಿ ತಪ್ಪಿಸಲು ಹೋದ ಯುವತಿಯ ಮೇಲೆ ಟ್ರಕ್ ಹರಿದು ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com .  ಚೆನ್ನೈ, ಜ. 04.   ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಯುವತಿ ಮೇಲೆ ಟ್ರಕ್ ಹರಿದು ಯುವತಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ  ಚಿನ್ನೈ ಸಮೀಪದ ಮಧುರವಾಯಲ್ ನಲ್ಲಿ ಸಂಭವಿಸಿದೆ. ಸ್ಥಳದಿಂದ ಟ್ರಕ್ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.

 

ಮೃತಳನ್ನು ಶೋಭನಾ (22) ಎಂದು ಗುರುತಿಸಲಾಗಿದೆ. ಈಕೆ ಜೋಹೋ ಹೆಸರಿನ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡಿತ್ತಿದ್ದಳು ಎನ್ನಲಾಗಿದೆ. ನೀಟ್ ಕೋಚಿಂಗ್ ತರಗತಿಗೆ ತನ್ನ ಸಹೋದರನನ್ನು ಬಿಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಇನ್ನೂ ಆಕೆ ಸಹೋದರ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೂನಮಲ್ಲಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪರಾರಿಯಾಗಿರುವ ಟ್ರಕ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group