18 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಗೆ ವಿಷ ಕುಡಿಸಿದ ದುಷ್ಕರ್ಮಿಗಳು

 (ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಜ.04. 18 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಬಳಿಕ ಆಕೆಗೆ ಬಲವಂತವಾಗಿ ವಿಷ ಕುಡಿಸಿದ ಆರೋಪದ ಮೇಲೆ ಒಂದೇ ಕುಟುಂಬದ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾದ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ವರದದಿಯಾಗಿದೆ.

ಪ್ರಮುಖ ಆರೋಪಿಯನ್ನು ಕಮಲ್ ಕುಮಾರ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ ಎನ್ನಲಾಗಿದೆ.

ಸಂತ್ರಸ್ತೆಯ ಕಿರುಚಾಟವನ್ನು ಕೇಳಿದ ಆಕೆಯ ತಾಯಿ, ಕಮಲ್ ಕುಮಾರ್‌ನ ಮನೆಗೆ ಬಂದಿದ್ದಾರೆ. ಆದರೆ, ಆರೋಪಿಯ ಕುಟುಂಬ ಸದಸ್ಯರು ಈ ಅಪರಾಧವನ್ನು ಮರೆಮಾಚಲು ಯುವತಿಯನ್ನು ಕೊಲ್ಲುವ ಉದ್ದೇಶದಿಂದ ಆಕೆಯು ವಿಷ ಸೇವಿಸುವಂತೆ ಮಾಡಿದ್ದಾರೆ ಎಂದಿದ್ದಾರೆ.

error: Content is protected !!
Scroll to Top