(ನ್ಯೂಸ್ ಕಡಬ) newskadaba.com ಬೆಳಗಾವಿ, ಜ. 04. ತನ್ನ ಗ್ರಾಮಕ್ಕೆ ನಿತ್ಯ ಬಸ್ ಸಂಚಾರಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ ಬಾಲಕಿಯೊಬ್ಬಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿಸುವ ಘಟನೆ ಕಿತ್ತೂರು ತಾಲೂಕಿನ ನಿಚ್ಚಣಕಿ ಗ್ರಾಮದಲ್ಲಿ ಸಂಭವಿಸಿದೆ.
ಮೃತ ಬಾಲಕಿಯನ್ನು ಅಕ್ಷತಾ ಈರಪ್ಪ ಹುಲಿಕಟ್ಟಿ ಎಂದು ಗುರುತಿಸಲಾಗಿದೆ. ಈಕೆ ಕಿತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯನ್ನು ಬಾಲಕಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.
ಅಕ್ಷತಾ ಮತ್ತು ಅವರ ಸ್ನೇಹಿತರು ಹಲವು ಬಾರಿ ಪ್ರತಿಭಟನೆ ನಡೆಸಿ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ್ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಬಸ್ ಸೇವೆಗಾಗಿ ಮನವಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ ಎಂದು ತಿಳಿದುಬಂದಿದೆ.