ಅಂಗವಿಕಲರಿಗೆ ಸರ್ಕಾರದಿಂದ ವಿಶೇಷ ಪ್ರೋತ್ಸಾಹ ➤ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿಕೆ

 (ನ್ಯೂಸ್ ಕಡಬ) newskadaba.com ಮಂಡ್ಯ, ಜ.04. ಅಂಗವಿಕಲರು ಸಮಾಜದ ಮುಖ್ಯವಾಹಿನಿಗೆ ಬರಲು ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಪ್ರೋತ್ಸಾಹ ನೀಡುತ್ತಿವೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿದ್ದಾರೆ.

ಪಿಇಟಿ ಕ್ರೀಡಾಂಗಣದಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ರಾಜ್ಯ ಅಂಧರ ಕ್ರಿಕೆಟ್ ಮಂಡಳಿ ಸಹಯೋಗದಲ್ಲಿ ಆಯೋಜಿಸಿರವ ಮೂರು ದಿನದ ರಾಜ್ಯಮಟ್ಟದ ಅಂಧರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಅಂಗವಿಕಲರು ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡ ಸತತವಾಗಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದ್ದಾರೆ. ಎಲ್ಲ ಹಂತದ ಚಟುವಟಿಕೆಗಳಲ್ಲಿ ಭಾಗವಹಿಸಲು ಅವರನ್ನು ಪ್ರೋತ್ಸಾಹಿಸಬೇಕು ಎಂದರು. ಅಂಗವಿಕಲರು ಅತಿ ಹೆಚ್ಚು ಪದಕಗಳನ್ನು ತರುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಹಾರಿಸುತ್ತಿದ್ದಾರೆ. ಅಭ್ಯಾಸ ನಡೆಸಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಅವಕಾಶ ಸಿಗಲಿ ಎಂದು ಹಾರೈಸಿದರು. ಅಂಧರ ಕ್ರಿಕೆಟ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನೇತ್ರರಾಜು,ಎಸ್ಪಿ ಎಜುಕೇಷನ್ ಟ್ರಸ್ಟ್ನ ರಂಗಸ್ವಾಮಿ, ವಿಕಸನ ಸಂಸ್ಥೆ ನಿರ್ದೇಶಕ ಮಹೇಶ್ ಚಂದ್ರ ಗುರು, ಸಮರ್ಥನಂ ಸಂಸ್ಥೆಯ ಪರಿಸರ ವಿಭಾಗದ ಮುಖ್ಯಸ್ಥ ಸತೀಶ್ ಇತರರು ಭಾಗವಹಿಸಿದ್ದರು.

Also Read  ದಿ .ಮುತ್ತಪ್ಪ ರೈ ನಿವಾಸದ ಮೇಲೆ ಸಿಸಿಬಿ ದಾಳಿ ➤ ಪುತ್ರ ರಿಕ್ಕಿ ರೈ ಡ್ರಗ್ಸ್ ಜಾಲದ ನಂಟು ಹೊಂದಿರುವ ಶಂಕೆ..!!?

error: Content is protected !!
Scroll to Top