ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಐವರ ಬಂಧನ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.05.  ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕು ಬಡಗಕಾರಂದೂರು ಗ್ರಾಮದ ನಡಾಯಿ ನಮನ ಡಾಬಾ ನಾರಾವಿ-ಗುರುವಾಯನಕೆರೆ ಬಳಿ ವದಿಯಾಗಿದೆ.

ಬಂಧಿತರನ್ನು ಬೆಳ್ತಂಗಡಿ ನಿವಾಸಿ ತೌಸೀಫ್ (32), ಉಸ್ಮಾನ್ (55), ಇಕ್ಬಾಲ್ (34), ಇರ್ಫಾನ್ (25) ಮತ್ತು ಅನಾಸ್ ಎಂದು ಗುರುತಿಸಲಾಗಿದೆ.

5 ಜನ ಆರೋಪಿಗಳನ್ನು ವಶಕ್ಕೆ ಪಡೆದು ಅಕ್ರಮ ಸಾಗಾಟ ಮಾಡುತ್ತಿದ್ದ 5 ಜಾನುವಾರುಗಳನ್ನು ಹಾಗೂ ಅಕ್ರಮ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಒಮ್ನಿ ಕಾರು ಮತ್ತು ದ್ವಿಚಕ್ರ ವಾಹನವನ್ನು ಸ್ವಾಧೀನ ಪಡಿಸಿದ್ದು, ಸ್ವಾಧೀನ ಪಡಿಸಿದ ಜಾನುವಾರುಗಳ ಅಂದಾಜು ಮೌಲ್ಯ 15,000 ರೂ. ಹಾಗೂ ವಾಹನಗಳ ಅಂದಾಜು ಮೌಲ್ಯ 1,75,000/- ರೂ. ಆಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group