ಮಹಿಳಾ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ…   ➤ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ – ಗೃಹ ಸಚಿವ ಆರಗ ಜ್ಞಾನೇಂದ್ರ                                    

(ನ್ಯೂಸ್ ಕಡಬ) newskadaba.com ಶಿವಮೊಗ್ಗ , ಜ.05. ಮಹಿಳಾ ಅಭ್ಯರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಿಹಿಸುದ್ದಿ ನೀಡಿದ್ದು, ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗದ ಜಿಲ್ಲಾ ಒಕ್ಕಲಿಗ ಮಹಿಳಾ ವೇದಿಕೆ ಆಯೋಜಿಸಿದ್ದ ಮಲೆನಾಡು ಮೇಳವನ್ನು ಉದ್ಘಾಟಿಸಿ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ್ದು, ಮಹಿಳಾ ಸಬಲೀಕರಣದ ಉದ್ದೇಶದಿಂದ ಮಹಿಳಾ ಅಭ್ಯರ್ಥಿಗಳಿಗೆ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಸಚಿವರು ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕೇಂದ್ರದಿಂದ 650 ಕೋಟಿ ರೂಪಾಯಿ ಮೀಸಲಿಡಲಾಗಿದೆ. ನಗರ ವ್ಯಾಪ್ತಿಯಲ್ಲಿ 3,000 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Also Read  ಮಂಗಳೂರು: ಹಲ್ಲೆ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಯತ್ನ..!

 

 

error: Content is protected !!
Scroll to Top