ವಿಟ್ಲ : ರಸ್ತೆ ಬದಿ ನಿಂತಿದ್ದ ಬಾಲಕಿಗೆ ಬೈಕ್ ಢಿಕ್ಕಿ    ➤ ಗಂಭೀರ ಗಾಯ…!!!               



(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.05. ರಸ್ತೆ ಬಳಿ ನಿಂತಿದ್ದ ಬಾಲಕಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡಿರುವ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಗಾಯಾಳು ವಿದ್ಯಾರ್ಥಿನಿಯನ್ನು ವಿಟ್ಲ ನಿವಾಸಿ ಬಶೀರ್ ಎಂಬವರ ಪುತ್ರಿ ಫಾತಿಮತ್ ನಿದಾ ಎಂದು ಗುರುತಿಸಲಾಗಿದೆ.







ಈಕೆ ವಿಟ್ಲ ಸರಕಾರಿ ಮಾದರಿ ಶಾಲೆಯ 5 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆಗೆ ಹೋಗಲು ಆಟೋ ರಿಕ್ಷಾಕ್ಕೆ ಕಾಯುತ್ತಿದ್ದ ವೇಳೆ ವಿಟ್ಮ ಕಡೆಯಿಂದ ಬಂದ ಬೈಕ್ ಢಿಕ್ಕಿಯಾಗಿ ಬಾಲಕಿಯನ್ನು ಎಳೆದುಕೊಂಡು ಹೋಗಿದೆ ಎಂದು ತಿಳಿದುಬಂದಿದೆ. ತಕ್ಷಣವೇ ಸ್ಥಳೀಯರು ಬಾಲಕಿಯನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.






 

error: Content is protected !!
Scroll to Top