ಕೊಲೆಗೆ ಸುಪಾರಿ‌ ಕೊಟ್ಟ ಆರೋಪ ► ಪತ್ರಕರ್ತ ರವಿ ಬೆಳಗೆರೆ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.08. ಕೊಲೆಗೆ ಸುಪಾರಿ ಕೊಟ್ಟ ಆರೋಪದಲ್ಲಿ ಪತ್ರಕರ್ತ ರವಿ ಬೆಳಗೆರೆಯವರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ.

ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರೊಬ್ಬರು ರವಿ ಬೆಳಗೆರೆಯವರ ಸಂಬಂಧಿಕರೋರ್ವರ ಜೊತೆ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ವರದಿಗಾರನ ಹತ್ಯೆಗೆ ಬೆಳಗೆರೆ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಗೆ 30 ಲಕ್ಷ ರೂ. ಸುಪಾರಿ ಕೊಟ್ಟಿದ್ದರೆನ್ನಲಾಗಿದೆ.

ಸುಪಾರಿ ಕೊಟ್ಟಿರುವ ಬಗ್ಗೆ ವಿಜಯಪುರ ಚಡಚಣದ ಶಶಿ ಮುಂಡೇವಾಡಗಿ ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ರವಿ ಬೆಳಗೆರೆಯವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Also Read  ಮೊದಲ ಅಧಿವೇಶನದಲ್ಲೇ ಕಾಂಗ್ರೆಸ್ ವಿರುದ್ಧ ಹೋರಾಡಿ ಜಯ ಸಾಧಿಸಿದ ಜೆಡಿಎಸ್ - ಸಚಿವ ಚಲುವರಾಯಸ್ವಾಮಿ ವಿರುದ್ಧ ತನಿಖೆಗೆ ಮುಂದಾದ ಸರಕಾರ

error: Content is protected !!
Scroll to Top