ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ  ➤ ಇಬ್ಬರ ಬಂಧನ, ಓರ್ವ ಪರಾರಿ…!!!                         

(ನ್ಯೂಸ್ ಕಡಬ) newskadaba.com ಉಡುಪಿ, ಜ. 05. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್ ವೊಂದಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ಜಯಂತ್ ಸಾಲಿಯಾನ್ (46) ಹಾಗೂ ಹೆಬ್ರಿಯ ದಿನೇಶ್ ಎಸ್ (42) ಎಂದು ಗುರುತಿಸಲಾಗಿದೆ. ಈ ವೇಳೆ ಶೇಖರ್ ಎಂಬಾತ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯನ್ನು ನಡೆಸುತ್ತಿರುವ ಬಗ್ಗೆ ದೂರು ಕೇಳಿಬಂದ ಹಿನ್ನೆಲೆ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಇತರ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದ್ದರು ಎನ್ನಲಾಗಿದೆ. ದಾಳಿಯ ಸಂದರ್ಭ ಕೃತ್ಯಕ್ಕೆ ಬಳಸಿದ 4 ಮೊಬೈಲ್ ಫೋನ್, 5600 ರೂ.ನಗದು, ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

Also Read  ದಿನಗೂಲಿ ನೌಕರರ ಮೇಲೆ ದೌರ್ಜನ್ಯ, ಮುನಿರತ್ನ ಮೇಲೆ ಮತ್ತೊಂದು ಎಫ್‌ಐಆರ್

 

 

error: Content is protected !!
Scroll to Top