ಚಿರತೆ ದಾಳಿ ➤ ವ್ಯಕ್ತಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಭಟ್ಕಳ, ಜ. 05. ಚಿರತೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವ  ಗಾಯಗೊಂಡ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ.

ಗಾಯಗೊಂಡವರನ್ನು ಭಟ್ಕಳ ತಾಲೂಕಿನ ನೂಜ್ ಕೆಕ್ಕೋಡ ನಿವಾಸಿ ದುರ್ಗು ಮರಾಠಿ (37) ಎಂದು ಗುರುತಿಸಲಾಗಿದೆ. ಇವರು ತಮ್ಮ ಮನೆಯ ಜಗುಲಿಯಲ್ಲಿ ಮಲಗಿದ್ದ ವೇಳೆ ದಾಳಿ ನಡೆಸಿದ ಚಿರತೆಯು ಅವರ ಕೈಗೆ ಕಚ್ಚಿ ಗಾಯಗೊಳಿಸಿದೆ. ಇದರಿಂದ ವ್ಯಕ್ತ ಕಿರುಚಿಕೊಂಡಿದ್ದು, ಜನರು ಬರುತ್ತಿದ್ದಂತೆಯೇ ಚಿರತೆ ಪರಾರಿಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಆರ್‌ಎಫ್‌ಒ ಶರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಗಾಯಗೊಂಡ ವ್ಯಕ್ತಿಗೆ ಸರ್ಕಾರದ ವತಿಯಿಂದ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ.

Also Read  ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಚಾಲನೆ

error: Content is protected !!
Scroll to Top