ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಥಾಣೆ, ಜ. 05.    ಮೆಟ್ರೋ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಹೆವಿ ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆ ನಗರದ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಮಾಲ್ ಬಳಿ ವರದಿಯಾಗಿದೆ.

ಮೃತ ಮಹಿಳೆಯನ್ನು ಸುನೀತಾ ಕಾಂಬಳೆ (37) ಎಂದು ಗುರುತಿಸಲಾಗಿದೆ. ಪಿಲ್ಲರ್‌ ನಿರ್ಮಾಣಕ್ಕೆಂದು ಅಗೆದ ಹೊಂಡದ ಸಮೀಪ ಈ ಅವಘಡ ಸಂಭವಿಸಿದ್ದು, ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಮತ್ತು ಆರ್‌ಡಿಎಂಸಿಯ ತಂಡವು ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ಹೊಂಡದಿಂದ ಹೊರತೆಗೆದಿದ್ದಾರೆ.

Scroll to Top