ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ  ➤ ಓರ್ವನ ಬಂಧನ..!!!                                  

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 05. ವಿಧಾನಸೌಧದಲ್ಲಿ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಸುಮಾರು 10.50 ಲಕ್ಷ ರೂಪಾಯಿಗಳನ್ನು ವಶಕ್ಕೆ ಪಡೆದಿರುವ ಘಟನೆ  ಬೆಂಗಳೂರಿನಲ್ಲಿ ವರದಿಯಾಗಿದೆ.

ವಿಧಾ‌ಸೌಧದ ಗೇಟ್‌ನಲ್ಲಿ ಪೊಲೀಸರು ಪರಿಶೀಲನೆ ಮಾಡುತ್ತಿದ್ದ ಸಂದರ್ಭ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಓರ್ವ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ. ಈತನ ಬಳಿ ಹಣದ ಮೂಲದ ಕುರಿತು ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ನೀಡದೇ ಇದ್ದ ಹಿನ್ನೆಲೆ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು, ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Also Read  ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ  ಮಹಿಳಾ ಆರೋಪಿ ಆತ್ಮಹತ್ಯೆಗೆ ಯತ್ನ.. !!!

error: Content is protected !!
Scroll to Top