ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಟೈಲರ್ ಅಂಗಡಿ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 05. ವಿದ್ಯುತ್ ಸರ್ಕ್ಯೂಟ್ ನಿಂದಾಗಿ ಟೈಲರ್ ಅಂಗಡಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು  ಕರಕಲಾದ ಘಟನೆ ಚಾಮರಾಜನಗರ ಪಟ್ಟಣದ ಸಂತೇಮರಳ್ಳಿ ವೃತ್ತದ ಸಮೀಪವಿರುವ ಜಾಮಿಯಾ ಮಸೀದಿ ಬಳಿ ನಡೆದಿದೆ.

ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದಾಗಿ ಅಂಗಡಿಯಲ್ಲಿದ್ದ ಬಟ್ಟೆಗಳು, ಟೈಲರ್ ಮೆಷಿನ್ ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿರುವುದಾಗಿ ತಿಳಿದುಬಂದಿದೆ.

Also Read  ಪೊಲೀಸ್ ಕಮಿಷನರ್ ನಡುವೆ ವಾಗ್ವಾದ ➤ 8 ಮಂದಿ ವಿರುದ್ಧ ಪ್ರಕರಣ

error: Content is protected !!
Scroll to Top