ಕಾಂಜಾವಾಲಾ ಅಪಘಾತ ಪ್ರಕರಣ ➤ 6ನೇ ಆರೋಪಿ ಕಾರಿನ ಮಾಲೀಕ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ದೆಹಲಿಯ ಕಾಂಜಾವಾಲಾ ಮಹಿಳೆಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಬಂಧಿಸಿದ ಕುರಿತು ವರದಿಯಾಗಿದೆ.

ಬಂಧಿತನನ್ನು ಕಾರಿನ ಮಾಲೀಕನಾಗಿರುವ ಆಶುತೋಷ್ ಎಂದು ಗುರುತಿಸಲಾಗಿದೆ. ಪ್ರಕರಣದ ಸಂಬಂಧ ಹೇಳಿಕೆ ನೀಡಿದ್ದ ದೆಹಲಿ ಪೊಲೀಸರು, ಕಾರಿನ ಮಾಲೀಕ ಅಶುತೋಷ್ ಮತ್ತು ಆರೋಪಿಗಳಲ್ಲಿ ಒಬ್ಬನ ಸಹೋದರನಾಗಿರುವ ಅಂಕುಶ್ ಎಂಬಾತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದಿದ್ದಾರೆ. “ಬಂಧಿತ ಐವರನ್ನು ಹೊರತುಪಡಿಸಿ ಇನ್ನೂ ಇಬ್ಬರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ನಮ್ಮ ಬಳಿ ಈ ಬಗ್ಗೆ ಸಾಕ್ಷ್ಯಾಧಾರಗಳಿವೆ. ಅಪರಾಧವೊಂದನ್ನು ಎಸಗಿ ಅದನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಬಂಧನದಲ್ಲಿರುವ ಆರೋಪಿಗಳನ್ನು ರಕ್ಷಿಸಲು ಪ್ರಯತ್ನ ನಡೆಸುತ್ತಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಸಾಗರ್‌ಪ್ರೀತ್ ಹೂಡಾ ಹೇಳಿದ್ದಾರೆ.

Also Read  ಸಿರಿ ತೋಟಗಾರಿಕೆ ಸಂಘದ ವತಿಯಿಂದ ➤ ಆರ್ಕಿಡ್ ಮತ್ತು ಅಂಥೂರಿಯಮ್ ಬೇಸಾಯ ತರಬೇತಿ

 

error: Content is protected !!
Scroll to Top