ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

(ನ್ಯೂಸ್ ಕಡಬ) newskadaba.com ಹಾವೇರಿ, ಜ. 06. ಇಂದಿನಿಂದ ಹಾವೇರಿಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಆರಾಧನೆ ಕನ್ನಡ ಅಕ್ಷರ ಜಾತ್ರೆ ಆರಂಭವಾಗಿದ್ದು, ಇನ್ನು 3 ದಿನಗಳ ಕಾಲ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇದರ ಅಂಗವಾಗಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ನಿಗದಿತ ಸಮಯಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭಗೊಂಡಿತು.

 

ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಜನವರಿ 6-8 ವರೆಗೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನ್ನಡಿಗರನ್ನು ಒಂದುಗೂಡಿಸುವ, ಸಾಹಿತ್ಯ ಕ್ಷೇತ್ರಕ್ಕೆ ಶಕ್ತಿ ನೀಡುವ ಈ ಹಬ್ಬ ಯಶಸ್ವಿಯಾಗಲಿ ಎಂದು ನಾಡಿನ ಗಣ್ಯರು ಶುಭಹಾರೈಸುತ್ತಿದ್ದಾರೆ.

Also Read  ಕಡಬ: 17ನೇ ವರ್ಷದ ಸೋಣ ನಡಾವಳಿ, ದೈವಗಳ ನೇಮೋತ್ಸವ - ಷಷ್ಠಿ ಪೂಜೆ

error: Content is protected !!
Scroll to Top