(ನ್ಯೂಸ್ ಕಡಬ) newskadaba.com ರಾಮನಗರ, ಜ. 06. ವಿಧಾನಸಭೆ ಚುನಾವಣೆಗೆ ಮುನ್ನ ಫೆಬ್ರವರಿಯೊಳಗೆ ಬೆಂಗಳೂರು-ಮೈಸೂರು 10 ಪಥದ ಎಕ್ಸ್‌ಪ್ರೆಸ್ ವೇ ಸಾರ್ವಜನಿಕರಿಗೆ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಮನಗರ ತಾಲೂಕು ಜಿಗೇನಹಳ್ಳಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರು, ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 170 ಕಿ.ಮೀ. ರಸ್ತೆಯ ವೈಮಾನಿಕ ಸಮೀಕ್ಷೆಯನ್ನು ಕೈಗೊಂಡ ನಂತರ ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರು ಮತ್ತು ಎಲ್ಲಾ ಪಾಲುದಾರರಿಗೆ ಸೂಚನೆ ನೀಡಿದರು. 9,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 10 ಪಥಗಳ ಎಕ್ಸ್‌ಪ್ರೆಸ್ ವೇ ರಾಮನಗರ- ಮಂಡ್ಯ- ಮೈಸೂರನ್ನು ಸಂಪರ್ಕಿಸುತ್ತದೆ ಮತ್ತು 53 ಕಿ.ಮೀ. ಉದ್ದದ ಹೊಸ ಬೈಪಾಸ್ ರಸ್ತೆಗಳನ್ನು ಹೊಂದಿರುತ್ತದೆ. ಒಮ್ಮೆ ಕಾಮಗಾರಿ ಪೂರ್ಣಗೊಂಡ ನಂತರ, ಇದು ಪ್ರಯಾಣದ ಸಮಯವನ್ನು 90 ನಿಮಿಷಗಳಿಗೆ ಕಡಿತಗೊಳಿಸುವ ನಿರೀಕ್ಷೆಯಿದೆ ಎಂದು ಹೇಳಿದರು.