ವಿಟ್ಲ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 06. ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಸಾರಡ್ಕ ಎಂಬಲ್ಲಿ ಸಂಭವಿಸಿದೆ.

ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ಮಚ್ಚಿನ ನಿವಾಸಿ ಕೇಶವ ನಾಯ್ಕ್ (56) ಎಂದು ಗುರುತಿಸಲಾಗಿದೆ. ಸಾರಡ್ಕದ ಕೃಷಿಕರೊಬ್ಬರ ಮನೆಯಲ್ಲಿ ಉಳಿದುಕೊಂಡು ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಕೇಶವರವರು ಹಲಸಿನ ಮರ ಏರಿ ಕಾಳು ಮೆಣಸು ಕೊಯ್ಯುವ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ವೈದ್ಯರು ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!!

error: Content is protected !!
Scroll to Top