ವಿಧಾನಸಭಾ ಚುನಾವಣೆ ➤ ರಾಜ್ಯದ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.06  ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಗುರುವಾರ ಬಿಡುಗಡೆ ಮಾಡಿದ್ದು, 221 ಕ್ಷೇತ್ರಗಳಲ್ಲಿ 5.05 ಕೋಟಿ ಮತದಾರರು ಇರುವುದು ಪಟ್ಟಿಯಿಂದ ತಿಳಿದುಬಂದಿದೆ.

ಇನ್ನುಳಿದ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರದಲ್ಲಿ ಮತದಾರರ ಮಾಹಿತಿ ಕಳ್ಳತನ ಆರೋಪದ ಕುರಿತು ವಿಚಾರಣೆ ನಡೆಯುತ್ತಿರುವ ಕಾರಣ ಜನವರಿ 15 ರಂದು ಪಟ್ಟಿಯ ಪ್ರಕಟಗೊಳ್ಳಲಿದೆ ಎಂದು ತಿಳಿದುಬಂದಿದೆ.

ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಗುರುವಾರ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದರು.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವಿವರಗಳ ಪ್ರಕಾರ, ಕರ್ನಾಟಕದಲ್ಲಿ ಮತದಾರರ ಸಂಖ್ಯೆ 5,05,48,553 ಇದ್ದು, ಹೊಸದಾಗಿ 12,31,540 ಮತದಾರರು ಸೇರ್ಪಡೆಗೊಂಡಿರುವುದು ತಿಳಿದುಬಂದಿದೆ. 6,18,965 ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಿರುವುದು ಕಂಡು ಬಂದಿದ್ದು, ಪರಿಷ್ಕೃತ ಮತದಾರರ ಪಟ್ಟಿಯಲ್ಲಿ 221 ಕ್ಷೇತ್ರಗಳಲ್ಲಿ ಒಟ್ಟು ಮತದಾರರ ಸಂಖ್ಯೆ 4,99,34,730 ಕಂಡು ಬಂದಿದೆ.

Also Read  ಪುತ್ತೂರು: ತಾ.ಪಂ ಸಾಮಾನ್ಯ ಸಭೆ ► ಎರಡು ವರ್ಷಗಳ ಬೇಡಿಕೆ ಈಡೇರಿಕೆಗಾಗಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ..!!!

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 6,50,53 ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಅತಿ ಕಡಿಮೆ ಅಂದರೆ 1,66,521 ಮತದಾರರಿದ್ದಾರೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಯುವ ಮತದಾರರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಈ ಬಾರಿ ಯುವ ಮತದಾರರ ಸಂಖ್ಯೆ 7,01,243 ಆಗಿದೆ.

2011 ರ ಜನಗಣತಿಯ ಪ್ರಕಾರ, ಕರ್ನಾಟಕದ ಲಿಂಗ ಅನುಪಾತವು 973ರಷ್ಟಿದೆ ಎಂದು ತಿಳಿಸಿತ್ತು. ಆದರೆ, ಅಂತಿಮ ಮತದಾರರ ಪಟ್ಟಿ-2023 ರ ಪ್ರಕಾರ, ಲಿಂಗ ಅನುಪಾತವು 988 ಆಗಿದೆ ಎಂದು ತಿಳಿಸಿದೆ. ಈ ವಿವರಗಳು ಜಿಲ್ಲಾ ಚುನಾವಣಾಧಿಕಾರಿಗಳು, ಚುನಾವಣಾ ನೋಂದಣಿ ಅಧಿಕಾರಿಗಳು, ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳು ಮತ್ತು ಎಲ್ಲಾ ಮತಗಟ್ಟೆಗಳಿಂದ ಬಂದಿರುವುದಾಗಿದೆ.

Also Read  ಕೊಂಬಾರು ಗ್ರಾ.ಪಂ. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ರಾಜೀನಾಮೆ..!!!

ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗಳನ್ನು ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ (https://ceo.karnataka.gov.in) ಅವರ ಅಧಿಕೃತ ವೆಬ್‌ಸೈಟ್‌ನಲ್ಲಿಯೂ ಪ್ರಕಟಿಸಲಾಗುತ್ತದೆ.

error: Content is protected !!
Scroll to Top