ವಿಟ್ಲ: ಆಟೋ ಮತ್ತು ಕಾರಿನ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 06. ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ನಡೆದಿರುವ ಘಟನೆ ವಿಟ್ಲ ಸಮೀಪದ ಸೇರಾಜೆ ರಸ್ತೆಯ ನೀರಕಣಿ ಎಂಬಲ್ಲಿ ಸಂಭವಿಸಿದೆ.

ಘಟನೆಯಿಂದ ಆಟೋದಲ್ಲಿದ್ದವರಿಗೆ ಗಾಯವಾಗಿದ್ದು, ಎರಡೂ ವಾಹನಗಳು ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

Scroll to Top