ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಇಂದೋರ್‌, ಜ. 06. ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದೋರ್ ಎಂಬಲ್ಲಿ ವರದಿಯಾಗಿದೆ.

ಈ ಕುರಿತು ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಜಿಮ್‌ನಲ್ಲಿ ವೃಂದಾವನದ ಮಾಲೀಕ ಪ್ರದೀಪ್ ರಘುವಂಶಿ ಕಸರತ್ತು ನಡೆಸುತ್ತಿದ್ದಾಗ ಹೃದಯಾಘಾತಗೊಂಡು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ಮೂಲಗಳು ತಿಳಿಸಿವೆ.

Also Read  ಬೆಳ್ಳಾರೆ: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು...!

error: Content is protected !!
Scroll to Top