ಮಾರ್ಚ್ 31 ರೊಳಗೆ ಆಧಾರ್ ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ ➤ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಪ್ಯಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದ್ದು, ಇದರ ಪ್ರಕಾರ, ಮಾರ್ಚ್ 31 2023 ರೊಳಗೆ ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಒಂದು ವೇಳೆ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಜೊತೆ ಲಿಂಕ್ ಮಾಡದಿದ್ದರೆ, ಪ್ಯಾನ್ ಕಾರ್ಡ್ ಅಮಾನ್ಯವಾಗುತ್ತದೆ. ಅಲ್ಲದೇ ಪ್ಯಾನ್ ಕಾರ್ಡ್ ಬಳಕೆಯನ್ನು ನಿಷೇಧಿಸಲಾಗುವುದು. ಆದರೆ, ಈಗಾಗಲೇ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಿದ್ದರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಆದಾಯ ತೆರಿಗೆ ಇಲಾಖೆ ನೀಡಿರುವ ಎಚ್ಚರಿಕೆಯಲ್ಲಿ ಮಾರ್ಚ್ 31 ರೊಳಗೆ ಆಧಾರ್ ಜೊತೆಗೆ ಪ್ಯಾನ್ ಲಿಂಕ್ ಮಾಡುವುದು ಕಡ್ಡಾಯ ಎಂದು ಸ್ಪಷ್ಟವಾಗಿ ಹೇಳಿದ್ದು, ಹಾಗಾಗಿ ಆಧಾರ್ ಜೊತೆ ಪ್ಯಾನ್ ಲಿಂಕ್ ಮಾಡುವುದನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ತಿಳಿಸಿದೆ.

Also Read  ಬೆಂಗಳೂರು: ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ

error: Content is protected !!
Scroll to Top