ಬೆಳ್ತಂಗಡಿ: ಮನೆಯೊಳಗೆ ಬೃಹತ್ ಕಾಳಿಂಗ ಸರ್ಪ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 06. ಮನೆಯೊಳಗಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಉರಗ ತಜ್ಞರೊಬ್ಬರು ಅದನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಹತ್ಯಡ್ಕ ಎಂಬಲ್ಲಿ ಸಂಭವಿಸಿದೆ.


ಇಲ್ಲಿನ ಹತ್ಯಡ್ಕ ನಿವಾಸಿಯಾಗಿರುವ ಉಮೇಶ್ ಎಂಬವರ ಮನೆಯ ರೂಮಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮಲಗಿರುವುದನ್ನು ಗಮನಿಸಿದ ಅವರು ತಕ್ಷಣ ಸ್ಥಳೀಯ ಉರಗ ತಜ್ಞರಾದ ಸ್ನೇಕ್ ಅಶೋಕ್ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

Also Read  ಮಂಗಳೂರು: ನಾಳೆ(ಏ.30)ಅಮಿತ್ ಶಾ ರೋಡ್ ಶೋ     ➤ ವಾಹನ ಸಂಚಾರದಲ್ಲಿ ಬದಲಾವಣೆ

error: Content is protected !!
Scroll to Top