ಶಿರಾಡಿ ಘಾಟಿ ನಿರ್ಮಾಣ ಕಾಮಗಾರಿ ಮಾರ್ಚ್ ನಲ್ಲಿ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ರಾಜಧಾನಿಯಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯು ಬರುವ ಮಾರ್ಚ್ ನಲ್ಲಿ ಆರಂಭಗೊಳ್ಳಲಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು  ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಘಾಟಿ ಬಳಿ ಚತುಷ್ಪದ ರಸ್ತೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಾರ್ಚ್ ನಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

Also Read  ಪುತ್ತೂರು: ಬೈಕ್ ಹಾಗೂ ಕಾರು ನಡುವೆ ಢಿಕ್ಕಿ

error: Content is protected !!
Scroll to Top