ದ.ಕ ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟ ➤ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ದ.ಕ. ಜಿಲ್ಲೆಯ ಮತದಾರರ ಅಂತಿಮ ಪಟ್ಟಿಯನ್ನು ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಪ್ರಕಟಿಸಿದ್ದಾರೆ.

ಈ ಕುರಿರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 23,57,852 ಜನಸಂಖ್ಯೆ ಇದ್ದು, ಅದರಲ್ಲಿ 17,37,688 ಮತದಾರರಿದ್ದಾರೆ. ಈ ಪೈಕಿ 8,50,552 ಪುರುಷ ಮತ್ತು 8,87,060 ಮಹಿಳಾ ಹಾಗೂ 76 ಮಂಗಳಮುಖಿಯರಿದ್ದಾರೆ ಎಂದು ತಿಳಿಸಿದರು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು 2,42,186 ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ 2,01,976 ಮತದಾರರಿದ್ದಾರೆ ಎಂದು ಹೇಳಿದ ಅವರು ಜಿಲ್ಲೆಯಲ್ಲಿ 25,259 ಯುವ ಮತದಾರರಿದ್ದಾರೆ ಎಂದು ಹೇಳಿದ್ದಾರೆ.

Also Read  ಇಂದಿನಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

error: Content is protected !!