ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ಅಪಘಾತ ಪ್ರಕರಣ ➤ ಆರೋಪಿ ಅರೆಸ್ಟ್…!!!!

crime, arrest, suspected

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜ.06. ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಈ ಕುರಿತು ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ಐದು ವರ್ಷಗಳಿಂದ  ತಲೆಮರೆಸಿಕೊಂಡಿದ್ದ ಆರೋಪಿ ಲಾರಿ ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಎಸ್.ಐ ಮೂರ್ತಿ ಅವರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ.

ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಲಾರಿ ಮತ್ತು ಸ್ಕೂಟರ್ ಢಿಕ್ಕಿಯಾಗಿ ಮೃತಪಟ್ಟಿದ್ದ ಎನ್ನಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಕೇರಳದ ಕಾಸರಗೋಡು ಜಿಲ್ಲೆಯ ಮುಳಿಯಾರು, ನೆಲ್ಲಿಕಾರು ನಿವಾಸಿ ನಜಾರ್ ಎನ್.ಎ. ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಆ ಬಳಿಕ ಲಾರಿ ಚಾಲಕ ವಿದೇಶದಲ್ಲಿದ್ದು, ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

Also Read  ಅನುಮಾನಕ್ಕೀಡಾದ 7ನೇ ತರಗತಿ ಪಬ್ಲಿಕ್ ಪರೀಕ್ಷೆ

 

error: Content is protected !!
Scroll to Top