NPS ಶಾಲೆಯಲ್ಲಿ ಬಾಂಬ್ ಭೀತಿ  ➤ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ಪತ್ತೆ, ಶ್ವಾನ ದಳ ಸಿಬ್ಬಂದಿಗಳು      

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಇಲ್ಲಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್​ ಬಂದಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡಾಯಿಸಿದ್ದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲೆಯಲ್ಲಿನ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿರುವುದಾಗಿ ತಿಳಿದುಬಂದಿದೆ.

ಬೆಂಗಳೂರಿನ ರಾಜಾಜಿನಗರದ ಎನ್.​ಪಿ.ಎಸ್ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು, ಇದರಿಂದ ಆತಂಕಗೊಂಡ ಶಾಲಾ ಆಡಳಿತ ಮಂಡಳಿ ಕೂಡಲೇ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಾಲಾ ಆವರಣದಲ್ಲಿ 4 ಜಿಲೆಟಿನ್ ಕಡ್ಡಿ ಇಟ್ಟಿರುವುದಾಗಿ ಇ-ಮೇಲ್ ಬಂದಿದ್ದು, ಬೆಳಗ್ಗೆ 11.30 ಮೇಲ್ ನೋಡಿದ ಶಾಲಾ ಸಿಬ್ಬಂದಿ‌, ತಕ್ಷಣ ಬಸವೇಶ್ವರನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

Also Read  ಡಿಕೆಶಿಗೆ ಡಿಸಿಎಂ ಸ್ಥಾನ ಕೊಟ್ಟಿರೋದು ನನಗೆ ತೃಪ್ತಿ ಇಲ್ಲ..!➤ ಡಿಕೆ ಸುರೇಶ್

error: Content is protected !!
Scroll to Top