ದ.ಕ. ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 06. ದ.ಕ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿ ಸಂಘದ ಅಧ್ಯಕ್ಷರಾಗಿ ಪುತ್ತೂರು ತಾಲೂಕು ಆರೋಗ್ಯಧಿಕಾರಿ ಡಾ.ದೀಪಕ್ ರೈ ಅವರನ್ನು ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಯಾಗಿ ಪುತ್ತೂರು ತಾಲೂಕಿನ ಈಶ್ವರಮಂಗಲ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಯಾಗಿ ಡಾ.ನಿಖಿಲ್ ಕೆ, ಉಪಾಧ್ಯಕ್ಷರಾಗಿ ಬಂಟ್ವಾಳ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಪ್ರಶಾಂತ್, ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಡಾ.ಕೃಷ್ಣಾನಂದ ಕೆ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ತಜ್ಞ ವೈದ್ಯ ಡಾ. ರಾಜೇಶ್ ಶೆಟ್ಟಿ, ಕೋಶಾಧಿಕಾರಿಯಾಗಿ ಬಂಟ್ವಾಳ ತಾಲೂಕಿನ ಸಜಿಪನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಹಮ್ಮದ್ ತುಫೈಲ್, ಜತೆ ಕೋಶಾಧಿಕಾರಿಯಾಗಿ ಪುತ್ತೂರು ತಾಲೂಕಿನ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಮಿತಾ, ಜಿಲ್ಲಾ ಪ್ರತಿನಿಧಿಯಾಗಿ ಪುತ್ತೂರು ತಾಲೂಕಿನ ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಅಮಿತ್‍ಕುಮಾರ್ ಟಿ.ಅವರನ್ನು ಆಯ್ಕೆ ಮಾಡಲಾಗಿದೆ.

Also Read  KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ                 ಮುಂದುವರಿದ ತನಿಖೆ

error: Content is protected !!
Scroll to Top