ಮಂಗಳೂರು: ಆರೋಗ್ಯ ಕಾರ್ಯಕರ್ತೆಯರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ತಾಲೂಕು ಮಟ್ಟದಲ್ಲಿ ಆದಿವಾಸಿ ಆರೋಗ್ಯ ಕಾರ್ಯಕರ್ತೆ ಹಾಗೂ ಜಿಲ್ಲಾ ಮಟ್ಟದಲ್ಲಿ ಆದಿವಾಸಿ ಆರೋಗ್ಯ ಸಂಯೋಜಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.


ಆರೋಗ್ಯ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 12,000 ರೂ.ಗಳು ಹಾಗೂ ಜಿಲ್ಲಾಮಟ್ಟದ ಆರೋಗ್ಯ ಸಂಯೋಜಕರಿಗೆ 15,000 ರೂ.ಗಳ ಗೌರವಧನ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಮಂಗಳೂರಿನ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಕಛೇರಿಯಿಂದ ಅರ್ಜಿ ಪಡೆದು ಜ.20ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2451269 ಸಂಪರ್ಕಿಸುವಂತೆ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಶಿರಾಡಿ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

error: Content is protected !!
Scroll to Top