ಮಂಗಳೂರು: ಗೃಹರಕ್ಷಕ ಕ್ಷೇಮಾಭಿವೃದ್ದಿ ನಿಧಿಯಿಂದ ಚೆಕ್ ಹಸ್ತಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಗೃಹರಕ್ಷಕರ ಮಕ್ಕಳ ವಿದ್ಯಾಭ್ಯಾಸ ಹಾಗೂ ಗೃಹರಕ್ಷಕರ ಮತ್ತು ಅವರ ಕುಟುಂಬದವರಿಗೆ ವೈದ್ಯಕೀಯ ವೆಚ್ಚ ಸಹಾಯಧನವನ್ನು ನೀಡಲಾಗುತ್ತದೆ.

ಮಂಗಳೂರು ಘಟಕದ ಗೃಹರಕ್ಷಕಿ ಸುಲೋಚನಾ ಅವರ ಮಗಳಾದ ಶ್ರೇಯಾ ಎಸ್. ಶೆಟ್ಟಿ ಅವರು ಎರಡನೇ ವರ್ಷದ ಬಿ.ಇ. (ಇಂಜಿನಿಯರಿಂಗ್) ವ್ಯಾಸಂಗಕ್ಕಾಗಿ 12,000 ರೂ. ಗಳು ಕೇಂದ್ರ ಕಚೇರಿಯಿಂದ ಸಹಾಯ ಧನ ಮಂಜೂರಾಗಿದ್ದು, ಮೇರಿಹಿಲ್‍ ನಲ್ಲಿರುವ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಶುಕ್ರವಾರದಂದು ಗೃಹರಕ್ಷಕದಳದ ಸಮಾದೇಷ್ಟ ಡಾ. ಮುರಲೀ ಮೋಹನ್ ಚೂಂತಾರು ಅವರು ಚೆಕ್ ನೀಡಿದರು. ಜಿಲ್ಲಾ ಗೃಹರಕ್ಷಕ ದಳದ ಉಪಸಮಾದೇಷ್ಟರಾದ ರಮೇಶ್, ಕಚೇರಿ ಅಧೀಕ್ಷಕ ರತ್ನಾಕರ ಎಂ, ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ.ಎಸ್, ಮೀನಾಕ್ಷಿ, ಗೃಹರಕ್ಷಕರಾದ ದಿವಾಕರ, ಸುನಿಲ್ ಕುಮಾರ್, ಧನಂಜಯ್, ವಿದೀಪ್, ರವಿ ಮೊದಲಾದವರು ಉಪಸ್ಥಿತರಿದ್ದರು.

Also Read  ಏನೆಕಲ್ಲು: ನೇಣು ಬಿಗಿದು ಯುವಕ ಆತ್ಮಹತ್ಯೆ

error: Content is protected !!
Scroll to Top