ಕನ್ನಡಕ್ಕೆ ಆಪತ್ತು ತರುವ ಶಕ್ತಿ ಇನ್ನೂ ಹುಟ್ಟಿಲ್ಲ, ಮುಂದೆ ಹುಟ್ಟುವುದೂ ಇಲ್ಲ ➤ ಸಿಎಂ ಬೊಮ್ಮಾಯಿ

 (ನ್ಯೂಸ್ ಕಡಬ) newskadaba.com ಹಾವೇರಿ, ಜ.07.  ಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಏಲಕ್ಕಿ ನಾಡು ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಇದಕ್ಕೆ ಆಪತ್ತು ತರುವ ಯಾವುದೇ ಶಕ್ತಿ ವಿಶ್ವದಲ್ಲಿ ಇನ್ನೂ ಹುಟ್ಟಿಲ್ಲ ಮತ್ತು ಹುಟ್ಟುವುದೂ ಇಲ್ಲ ಎಂದು ಹೇಳಿದರು.

Also Read  ಬಿಪಿಎಲ್ ಪಡಿತರ ಚೀಟಿ ಮಾನದಂಡ ಪರಿಶೀಲನೆಗೆ ಸಮಿತಿ ರಚನೆ- ಆರ್.ವಿ.ದೇಶಪಾಂಡೆ

ಇಡೀ ದೇಶದಲ್ಲಿ ಕನ್ನಡಕ್ಕೆ ಮಾತ್ರ ಎಂಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿವೆ. ದೇಶದ ಬೇರೆ ಯಾವ ಭಾಷೆಗೂ ಸಹ ಇಷ್ಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿಲ್ಲ. ಒಂದು ಭಾಷೆ ಒಂದು ಸಂಸ್ಕೃತಿ ಬೆಳೆಯಬೇಕಂದರೇ ಇದುವರೆಗೆ ನಡೆದ ಬಂದ ದಾರಿಯ ಸಿಂಹಾವಲೋಕನ ಮಾಡಬೇಕಾಗುತ್ತದೆ. ಆಗ ಅದು ಮುಂದಿನ ದಾರಿಯನ್ನು ನಿರ್ಧರಿಸುತ್ತದೆ ಎಂದರು. ಇಬ್ಬರು ಸರಸ್ವತಿ ಸಮ್ಮಾನ್ ಪುರಸ್ಕೃತರು ಸಹ ನಮ್ಮ ಕನ್ನಡ ನಾಡಿನಲ್ಲಿರುವುದು ವಿಶೇಷವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

error: Content is protected !!
Scroll to Top