(ನ್ಯೂಸ್ ಕಡಬ)newskadaba.com ಕಲಬುರಗಿ, ಜ.07. ಆರ್.ಎಸ್.ಎಸ್ ಯೂನಿಫಾರ್ಮ್ ಹಾಕಿ ಲಾಠಿ ಹಿಡಿದು ಮೂವರು ಪ್ರಾಧ್ಯಾಪಕರು ಫೋಸ್ ಕೊಟ್ಟಿದ್ದಾರೆ ಎಂದು ವರದಿಯಾಗಿದೆ.
ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಘಟನೆ ಸಂಭವಿಸಿದ್ದು, ಸಾರ್ವಜನಿಕ ಆಡಳಿತ ವಿಭಾಗದ ಪ್ರಾಧ್ಯಾಪಕರಾದ ಡಾ.ಅಲೋಕ್ ಕುಮಾರ್ ಗೌರವ್, ಮನಃಶಾಸ್ತ್ರದ ವಿಭಾಗದ ಡಾ.ವಿಜಯೇಂದ್ರ ಪಾಂಡೆ ಮತ್ತು ಜೀವ ವಿಜ್ಞಾನ ವಿಭಾಗದ ಡಾ.ರಾಕೇಶ್ ಕುಮಾರ್ ಅವರು RSS ವೇಷಧಾರಿ ವಿದ್ಯಾರ್ಥಿ ಜೊತೆ ತಾವು ವೇಷಧಾರಿಗಳಾಗಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ ಎನ್ನಲಾಗಿದೆ.