ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤  ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ)newskadaba.com  ಶಿವಮೊಗ್ಗ, ಜ.07. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ 19 ವರ್ಷದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್‌ಪೆಕ್ಟರ್‌ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದರು ಎನ್ನಲಾಗಿದೆ.

ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್‌ಟ್ರ್ಯಾಕ್‌ ವಿಶೇಷ ನ್ಯಾಯಾಲಯದ (ಪೋಕ್ಸೋ ವಿಭಾಗ) ನ್ಯಾಯಾಧೀಶರಾದ ನ್ಯಾ.ಜೆ.ಎಸ್‌.ಮೋಹನ್‌ ಅವರು ವಿಚಾರಣೆ ನಡೆಸಿದರು. ಆರೋಪ ಸಾಬೀತಾದ ಹಿನ್ನೆಲೆ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರು. ದಂಡ ವಿಧಿಸಿದ್ದು, ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಸಾದಾ ಶಿಕ್ಷೆ ನೀಡಿ ಎಂದು ಆದೇಶ ಹೊರಡಿಸಲಾಗಿದೆ. ಸರ್ಕಾರಿ ಅಭಿಯೋಜಕರಾಗಿ ಹರಿಪ್ರಸಾದ್‌ ವಾದ ಮಂಡಿಸಿದ್ದರು ಎಂದು ವರದಿ ತಿಳಿಸಿದೆ.

Also Read  ಆರಂಭಿಕ ಆಘಾತದಿಂದ ಚೇತರಿಸಿಕೊಂಡ ಆಸ್ಟ್ರೇಲಿಯಾ..!

 

error: Content is protected !!
Scroll to Top