ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿ ಮೃತ್ಯು..! ➤ ತನಿಖೆಗೆ ಸಚಿವರಿಂದ ಆದೇಶ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.07. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿಯೊಬ್ಬಳು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ.

 

ಮೃತಪಟ್ಟ ಯುವತಿಯನ್ನು ಪೆರುಂಬಳಾದ ಅಂಜು ಶ್ರೀಪಾರ್ವತಿ (20)  ಎಂದು ಗುರುತಿಸಲಾಗಿದೆ.

ಆನ್ ಲೈನ್ ಮೂಲಕ ಬಿರಿಯಾನಿ ತರಿಸಿಕೊಂಡು ಅಸ್ವಸ್ತಗೊಂಡ ಯುವತಿಯನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ತದನಂತರ ಮಂಗಳೂರಿನ ಮತ್ತೊಂದು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತ ಯುವತಿಯ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ಕೇಸ್ ದಾಖಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಧ್ಯೆ ಆರೋಗ್ಯ ಸಚಿವೆ ವೀಣಾ ಜಾರ್ಜ್, ಘಟನೆ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಈ ವಾರದ ಆರಂಭದಲ್ಲಿ ಕೊಟ್ಟಯಂ ವೈದ್ಯಕೀಯ ಕಾಲೇಜಿನ ನರ್ಸ್ ಒಬ್ಬರು ಇದೇ ರೀತಿಯ ಆಹಾರ ಸೇವಿಸಿದ ನಂತರ ಮೃತಪಟ್ಟಿದ್ದರು ಎನ್ನಲಾಗಿದೆ.

error: Content is protected !!
Scroll to Top