ಮೂರನೇ ಹಂತದ “ನಮ್ಮ ಮೆಟ್ರೋ”  ಕಾಮಗಾರಿಗೆ ಒಪ್ಪಿಗೆ ➤  ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ರಾಜಧಾನಿಯ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ 27 ಸಾವಿರ ಕೋಟಿ ರೂಪಾಯಿ ಮೊತ್ತದ ಮೂರನೇ ಹಂತದ “ನಮ್ಮ ಮೆಟ್ರೋ”  ಕಾಮಗಾರಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ನಗರದ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ರಸ್ತೆಗಳ ಅಗಲೀಕರಣ ಮಾಡುವ ಜೊತೆಗೆ ನಮ್ಮ ಮೆಟ್ರೋ ಮಾರ್ಗಗಳನ್ನು ವಿಸ್ತರಿಸಲಾಗುವುದು. ಇದರ ಜೊತೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರು 2040 ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರಿನಲ್ಲಿ ವಿದ್ಯುತ್ ಚಾಲಿತ ವಾಹನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಕಂಪನಿಗಳಿಗೆ ಇದೇ ವೇಳೆ ಕರೆ ನೀಡಿದ್ದಾರೆ ಎಂದು ವರದಿಯಾಗಿದೆ.

Also Read  ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಗುದ್ದಿದ ಕಾರು ➤ ಚಾಲಕ ಸ್ಥಳದಲ್ಲೇ ಮೃತ್ಯು

 

error: Content is protected !!
Scroll to Top