ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ನೇಮಕ ➤  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್..!!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ಮಂಡ್ಯದ ಬಿಜೆಪಿ ಮುಖಂಡ ಕೆ. ನಾಗಣ್ಣಗೌಡ ಅವರನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಹೊರಡಿಸಿದೆ ಎಂದು ವರದಿಯಾಗಿದೆ.

ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆ ಆಯೋಗದ ನಿಬಂಧನೆಗಳ ವಿರುದ್ಧವಾಗಿ ನಾಗಣ್ಣಗೌಡ ಅವರನ್ನು ನೇಮಿಸಿ ಸರ್ಕಾರ ಹೊರಡಿಸಿರುವ ಆದೇಶಕ್ಕೆ ತಡೆ ನೀಡಬೇಕೆಂದು ಅರ್ಜಿ ಸಲ್ಲಿಸಿರುವ ದೂರುದಾರರಾದ ವಕೀಲೆ ಸುಧಾ ಕತ್ವಾ, ಅರ್ಜಿ ಬಾಕಿಯಿರುವಾಗ  ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸದಂತೆ ನಿರ್ಬಂಧಿಸಬೇಕು ಎಂದು ನ್ಯಾಯಾಲಯವನ್ನು ಒತ್ತಾಯಿಸಿದರು.

Also Read  ನಾಪತ್ತೆಯಾಗಿದ್ದ ಸವಣೂರಿನ ಯುವತಿ ವಿವಾಹಕ್ಕೆ ಟ್ವಿಸ್ಟ್ ➤ ಪ್ರಿಯಕರನ ವಿರುದ್ದ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ದಾಖಲು

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿನಾಗಿ ಅವರಿದ್ದ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ಹೊರಡಿಸಿತು ಎನ್ನಲಾಗಿದೆ.

 

 

error: Content is protected !!
Scroll to Top