ರಿಷಬ್ ಪಂತ್ ಗೆ ಯಶಸ್ವಿಯಾಗಿ ನಡೆದ ಮೊಣಕಾಲಿನ ಶಸ್ತ್ರಚಿಕಿತ್ಸೆ

 (ನ್ಯೂಸ್ ಕಡಬ) newskadaba.com ಮುಂಬೈ, ಜ.07.  ಇತ್ತೀಚಿಗೆ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಗೆ ಶನಿವಾರ ಮುಂಬೈನಲ್ಲಿ ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಕಳೆದ ವಾರ ನಡೆದ ಭೀಕರ ಕಾರು ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಭಾರತದ ವಿಕೆಟ್‌ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಮುಂಬೈ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.  ಅಂಧೇರಿ ಪಶ್ಚಿಮದಲ್ಲಿರುವ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಸ್ಪೋರ್ಟ್ಸ್ ಮೆಡಿಸಿನ್ ಕೇಂದ್ರದ ಮುಖ್ಯಸ್ಥ ಮತ್ತು ಆರ್ತ್ರೋಸ್ಕೊಪಿ ಮತ್ತು ಭುಜದ ಸೇವೆಯ ನಿರ್ದೇಶಕ ಡಾ ಪಾರ್ದಿವಾಲಾ ಅವರ ಮೇಲ್ವಿಚಾರಣೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯಿತು. ಪಂತ್ ಅವರು ವಾಣಿಜ್ಯ ವಿಮಾನಯಾನದಲ್ಲಿ ಬರುವ ಸ್ಥಿತಿಯಲ್ಲಿಲ್ಲದ ಕಾರಣ ಅವರನ್ನು ಡೆಹ್ರಾಡೂನ್‌ನಿಂದ ಏರ್ ಆಂಬ್ಯುಲೆನ್ಸ್ ಮೂಲಕ ಮುಂಬೈಗೆ ಕರೆದೊಯ್ಯಲಾಗಿತ್ತು ಎಂದು ತಿಳಿದು ಬಂದಿದೆ.

Also Read  ಲಾಡ್ಜ್ ವೊಂದರಲ್ಲಿ ಪ್ರೇಯಸಿಯಿಂದಲೇ ಪ್ರಿಯಕರನ ಹತ್ಯೆ..!   

error: Content is protected !!
Scroll to Top