ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಹೆಸರು ಅಧಿಕೃತ    ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com  ಚಿಕ್ಕಬಳ್ಳಾಪುರ, ಜ.08.  ಚಿಕ್ಕಬಳ್ಳಾಪುರದ ಪುಣ್ಯಭೂಮಿಯು ಜನರ ಬದುಕಿನ ಭವಿಷ್ಯವನ್ನು ಬರೆಯಲು ʼಚಿಕ್ಕಬಳ್ಳಾಪುರ ಉತ್ಸವʼವು ಮುನ್ನುಡಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಯಲುಸೀಮೆ, ಐತಿಹಾಸಿಕ ತಾಣಗಳ ಕೇಂದ್ರವಾದ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಪ್ರಥಮ ಚಿಕ್ಕಬಳ್ಳಾಪುರ ಉತ್ಸವಕ್ಕೆ ಅದ್ದೂರಿಯ ಚಾಲನೆ ದೊರೆಯಿತು. ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಎಂಬ ಹೆಸರನ್ನು ನೀಡಲಾಗಿದ್ದು, ಕಾರ್ಯಕ್ರಮದಲ್ಲಿ ಈ ಹೆಸರನ್ನು ಅನಾವರಣ ಮಾಡಲಾಯಿತು.

ಕಲೆ, ಕ್ರೀಡೆ, ಆಹಾರ, ಉದ್ಯೋಗಾವಕಾಶ, ಆರೋಗ್ಯ ಮೇಳ ಮೊದಲಾದವುಗಳನ್ನೊಳಗೊಂಡ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದು, ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಖ್ಯಾತ ಎಂಜಿನಿಯರ್ ಸರ್.ಎಂ.ವಿಶ್ವೇಶ್ವರಯ್ಯ, ವಿಜ್ಞಾನದಲ್ಲಿ ಸಾಧನೆ ಮಾಡಿದ ಸಿ.ಎನ್.ಆರ್ ರಾವ್ ಇಲ್ಲಿಯವರೇ ಆಗಿದ್ದಾರೆ. ಹೀಗೆ ಇಬ್ಬರು ಭಾರತರತ್ನಗಳನ್ನು ಈ ಜಿಲ್ಲೆ ನೀಡಿದೆ. ಇತಿಹಾಸ ಪ್ರಸಿದ್ಧ ಭೋಗನಂದೀಶ್ವರ ದೇವಸ್ಥಾನ ಇಲ್ಲೇ ಇದೆ. ಇಂತಹ ವಿಶಿಷ್ಟ ಜಿಲ್ಲೆಯನ್ನು ಈಗ ಫಲ ಪುಷ್ಪ ಗಿರಿಧಾಮ ನಾಡು ಎಂದು ಕರೆಯಲಾಗಿದೆ. ಈ ಹೆಸರನ್ನು ಪ್ರವಾಸೋದ್ಯಮ ಇಲಾಖೆಯಿಂದ ಅಧಿಕೃತಗೊಳಿಸಲಾಗುವುದು ಎಂದು ತಿಳಿಸಿದರು.

 

error: Content is protected !!

Join the Group

Join WhatsApp Group